ನರಸಿಂಹರಾಜು ಜನ್ಮ ಶತಮಾನೋತ್ಸವ: ವರ್ಷವಿಡೀ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡ ಕುಟುಂಬಸ್ಥರು

ದಿವಂಗತ ನಟ ನರಸಿಂಹರಾಜು ಅವರ ನೂರನೇ ವರ್ಷದ ಹುಟ್ಟುಹಬ್ಬ ಇದೇ ಜುಲೈ 24 ರಂದು. ‘ಹಾಸ್ಯ ಚಕ್ರವರ್ತಿ’ ನರಸಿಂಹರಾಜು ಅವರ ಜನ್ಮ ಶತಮಾನೋತ್ಸವವನ್ನ ಇಡೀ ವರ್ಷ ವಿವಿಧ ಕಾರ್ಯಕ್ರಮಗಳ ಮೂಲಕ ಆಚರಿಸಲು ಕುಟುಂಬಸ್ಥರು ಮತ್ತು ಅಭಿಮಾನಿಗಳು ಮುಂದಾಗಿದ್ದಾರೆ. ಕಾರ್ಯಕ್ರಮಗಳ ವಿವರ ಇಲ್ಲಿದೆ.

 

 

ಹೈಲೈಟ್ಸ್‌:

  • ನರಸಿಂಹರಾಜು ಅವರ ಜನ್ಮ ಶತಮಾನೋತ್ಸವ
  • ವರ್ಷಪೂರ್ತಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿದ ಕುಟುಂಬಸ್ಥರು
  • ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ

 

ಕನ್ನಡ ಚಿತ್ರರಂಗದಲ್ಲಿ ಹಾಸ್ಯ ಚಕ್ರವರ್ತಿ ಎಂದೇ ಪ್ರಖ್ಯಾತಿ ಪಡೆದವರು ದಿವಂಗತ ನಟ ನರಸಿಂಹರಾಜು. ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನದಲ್ಲಿ ಅಚ್ಚಳಿಯದೆ ಉಳಿದಿರುವವರು ನರಸಿಂಹರಾಜು.

ಜುಲೈ 24, ನರಸಿಂಹರಾಜು ಅವರ ನೂರನೇ ವರ್ಷದ ಹುಟ್ಟುಹಬ್ಬ. ಈ ಸಂಭ್ರಮವನ್ನು ‘ನರಸಿಂಹರಾಜು ಜನ್ಮ‌ ಶತಮಾನೋತ್ಸವ’ ಎಂಬ ಹೆಸರಿನಿಂದ ವರ್ಷವಿಡೀ ಹಲವು ಕಾರ್ಯಕ್ರಮಗಳೊಂದಿಗೆ ಆಚರಿಸಲು ನರಸಿಂಹರಾಜು ಅವರ ಕುಟುಂಬದವರು ಹಾಗೂ ಅಭಿಮಾನಿಗಳು ನಿರ್ಧರಿಸಿದ್ದಾರೆ.

ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ

‘ನರಸಿಂಹರಾಜು ಜನ್ಮ ಶತಮಾನೋತ್ಸವ’ ಪ್ರಯುಕ್ತ ಆಯೋಜಿಸಲಾಗುವ ಕಾರ್ಯಕ್ರಮಗಳ ಪೈಕಿ ಮೊದಲನೆಯದಾಗಿ ನರಸಿಂಹರಾಜು ಅವರನ್ನು ಈಗಿನ ಯುವಜನತೆಗೆ ತಲುಪಿಸುವ ಪ್ರಯತ್ನ ಹಾಗೂ ಉದ್ದೇಶವಿದೆ. ಹೀಗಾಗಿ ಹನ್ನೆರಡು ಜನರ ತಂಡ ಎರಡು ಟ್ರಕ್‌ಗಳ ಮೂಲಕ ಕರ್ನಾಟಕದ ಮೂವತ್ತೆರಡು ಜಿಲ್ಲೆಗಳ ಆಯ್ದ ಕಾಲೇಜುಗಳಿಗೆ ಭೇಟಿ ನೀಡುತ್ತಾರೆ. ಆ ಟ್ರಕ್‌ನಲ್ಲಿ ಎಲ್ ಇ ಡಿ ಅಳವಡಿಸಿ, ಆ ಮೂಲಕ ವಿದ್ಯಾರ್ಥಿಗಳಿಗೆ ನರಸಿಂಹರಾಜು ಅವರ ಬಗೆಗಿನ ತುಣುಕುಗಳನ್ನು ತೋರಿಸಲಾಗುತ್ತದೆ. ಆನಂತರ ನರಸಿಂಹರಾಜು ಅವರ ಕುರಿತು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸಹ ಕೇಳಲಾಗುತ್ತದೆ.

ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವ

‘ನರಸಿಂಹರಾಜು ಜನ್ಮ ಶತಮಾನೋತ್ಸವ’ ಪ್ರಯುಕ್ತ ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವ (ಹಾಸ್ಯದ ಕುರಿತು) ಆಯೋಜಿಸಲಾಗುವುದು. ನವೆಂಬರ್ ಅಥವಾ ಡಿಸೆಂಬರ್ ತಿಂಗಳಿನಲ್ಲಿ ದೊಡ್ಡಮಟ್ಟದ ಸಮಾರಂಭ ಆಯೋಜಿಸಲಾಗುತ್ತದೆ. ಆ ಕಾರ್ಯಕ್ರಮದಲ್ಲಿ ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವದ ವಿಜೇತರಿಗೆ ಬಹುಮಾನ ನೀಡಲಾಗುತ್ತದೆ.

 

ಆಯೋಜನೆ

‘ನರಸಿಂಹರಾಜು ಜನ್ಮ ಶತಮಾನೋತ್ಸವ’ ಪ್ರಯುಕ್ತ ಕರ್ನಾಟಕದಾದ್ಯಂತ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಯ ನಾಟಕಗಳನ್ನು (ನರಸಿಂಹರಾಜು ಅವರ ಅಭಿನಯದ ನಾಟಕಗಳು ಮಾತ್ರ) ಆಯೋಜಿಸಲಾಗುವುದು.

ಕರ್ನಾಟಕದ ಸುಮಾರು ಎಂಟು ಜಲ್ಲೆಗಳಲ್ಲಿ ಈಗಲೂ ನಾಟಕ ಕಂಪನಿಗಳಿವೆ. ಆ ಪ್ರಸಿದ್ದ ನಾಟಕ ಕಂಪನಿಗಳ ಮೂಲಕ ಜನಪ್ರಿಯ ನಾಟಕಗಳನ್ನು ಸೂರ್ಯಾಸ್ತದಿಂದ ಸೂರ್ಯೋದಯದವರೆಗೂ ಆಯೋಜಿಸುವ ಯೋಜನೆಯಿದೆ. ಹೀಗೆ ಇನ್ನೂ ಹಲವಾರು ಕಾರ್ಯಕ್ರಮಗಳ ಮೂಲಕ ನರಸಿಂಹರಾಜು ಅವರ ಜನ್ಮ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ತಯಾರಿ ನಡೆಸಲಾಗುತ್ತಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಜುಲೈ 24 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು, ನರಸಿಂಹರಾಜು ಅವರ ಮೊಮ್ಮಕ್ಕಳಾದ ಅರವಿಂದ್ ಹಾಗೂ ಅವಿನಾಶ್ ತಿಳಿಸಿದ್ದಾರೆ.

ಸದಾ ನೆನಪಿನಲ್ಲಿ ಉಳಿಯುವ ನರಸಿಂಹರಾಜು ಅವರ ಪಾತ್ರಗಳು

‘ಶ್ರೀಕೃಷ್ಣದೇವರಾಯ’ ಚಿತ್ರದಲ್ಲಿ ತೆನಾಲಿ ರಾಮಕೃಷ್ಣನಾಗಿ, ‘ಸತ್ಯ ಹರಿಶ್ಚಂದ್ರ’ ಚಿತ್ರದಲ್ಲಿ ನಕ್ಷತ್ರಿಕನಾಗಿ ನರಸಿಂಹರಾಜು ನಟಿಸಿದ್ದರು. ‘ಸಂಧ್ಯಾರಾಗ’, ‘ವೀರ ಕೇಸರಿ’, ‘ರತ್ನ ಮಂಜರಿ’, ‘ಕಣ್ತೆರೆದು ನೋಡು’, ‘ರಾಯರ ಸೊಸೆ’.. ಹೀಗೆ ಇನ್ನೂರೈವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ನರಸಿಂಹರಾಜು ಅಭಿನಯಿಸಿದ್ದಾರೆ. ಅವರ ಪಾತ್ರಗಳು ಕನ್ನಡ ಸಿನಿಪ್ರಿಯರ ಮನದಲ್ಲಿ ಅಚ್ಚಳಿಯದೆ ಉಳಿದಿವೆ.

Recent Articles

spot_img

Related Stories

Share via
Copy link