ಪ್ರಿಯಾಂಕ್ ಖರ್ಗೆ : ಇಷ್ಟು ತಡವಾಗಿ ಪಿಎಫ್‌ಐ ಬ್ಯಾನ್ ಮಾಡಿರುವುದು ಗುಪ್ತಚರ ಇಲಾಖೆಯ ವೈಫಲ್ಯ.

ಬೆಂಗಳೂರು: ದೇಶಾದ್ಯಂತ ಪಿಎಫ್‌ಐ (PFI) ಅನ್ನು 5 ವರ್ಷ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಒಳ್ಳೆಯ ನಿರ್ಧಾರವನ್ನೇ ಕೈಗೊಂಡಿದೆ. ಆದರೆ ಇಷ್ಟು ತಡವಾಗಿ ಬ್ಯಾನ್ ಮಾಡಿರುವುದು ಗುಪ್ತಚರ ಇಲಾಖೆಯ (Intelligence Department) ದೊಡ್ಡ ವೈಫಲ್ಯವಾಗಿದೆ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ.

ಕರ್ನಾಟಕ, ಗುಜರಾತ್, ಅಸ್ಸಾಂ, ಮಧ್ಯಪ್ರದೇಶ, ಸೇರಿದಂತೆ ಇದು ದೇಶವ್ಯಾಪಿ ಇದ್ದಂತಹ ಜಾಲ. ಇಷ್ಟು ವರ್ಷ ಜಾರಿ ನಿರ್ದೆಶನಾಲಯ (ED), ಗುಪ್ತಚರ ಇಲಾಖೆ ಹಾಗೂ ಸ್ಟೇಟ್ ಡಿಪಾರ್ಟ್ಮೆಂಟ್‌ಗಳಿಗೆ ಅವರ ಭಯೋತ್ಪಾದನಾ ಚಟುವಟಿಕೆ, ಅಕ್ರಮ ಹಣ ವರ್ಗಾವಣೆಗಳು ಗಮನಕ್ಕೆ ಬಂದಿರಲಿಲ್ಲವೇ ಎಂದು ಪ್ರಶ್ನಿಸಿದರು.

ಈ ಸಂಘಟನೆ ದೇಶಾದ್ಯಂತ ಇದ್ದರೂ ಇಷ್ಟು ದಿನ ಯಾಕೆ ಹೀಗೇ ಬಿಟ್ಟಿದ್ದರು ಎಂಬ ಪ್ರಶ್ನೆ ಮೂಡುತ್ತದೆ. ಇಷ್ಟು ತಡವಾಗಿ ಪಿಎಫ್‌ಐಯನ್ನು ಬ್ಯಾನ್ ಮಾಡಿರುವುದು ಅಧಿಕಾರಿಗಳ ದೊಡ್ಡ ವೈಫಲ್ಯ ಎಂದು ಹೇಳಿದರು.

Recent Articles

spot_img

Related Stories

Share via
Copy link