ಬಿ ಎಲ್ ಡಿ ಇ ಸಂಸ್ಥೆಯ ಹಳೆ ವಿದ್ಯಾರ್ಥಿಗಳ ಸಂಘದಿಂದ ಶೈಕ್ಷಣಿಕ ಚಟುವಟಿಕೆ : M. C. ಕಾರಭಾರಿ

ಜಮಖಂಡಿ07: ಪ್ರತಿವರ್ಷದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಉನ್ನತ ವ್ಯಾಸಂಗಕ್ಕಾಗಿ ಹತ್ತಾರು ಕಲಿಕಾ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿಗಳ ಸಂಘದಿಂದ ಆರ್ಥಿಕ ಸಹಾಯ ಮಾಡುವ ಮೂಲಕ ಸಾಮಾಜಿಕ ಮತ್ತು ಶೈಕ್ಷಣಿಕ ಸೇವೆಗಳಲ್ಲಿ ತೊಡಗಿಕೊಂಡಿದೆ ಎಂದು ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರೊ.ಎಂ.ಸಿ.ಕಾರಭಾರಿ ಹೇಳಿದರು.

ನಗರದ ಬಿ.ಎಲ್.ಡಿ.ಇ ಸಂಸ್ಥೆ ವಾಣಿಜ್ಯ, ಬಿ.ಎಚ್.ಎಸ್ ಕಲೆ ಮತ್ತು ಟಿ.ಜಿ.ಪಿ ವಿಜ್ಞಾನ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಂಘದ ಕಛೇರಿ ಸಭಾಭವನದಲ್ಲಿ ಮಾತನಾಡಿದ ಅವರು, ನವೆಂಬರ್ ೯ ರಂದು ಬೆಳಿಗ್ಗೆ ೧೦ ಗಂಟೆಗೆ ಮಹಾವಿದ್ಯಾಲಯದ ಉಪನ್ಯಾಸ ಮಂದಿರ-೧ರಲ್ಲಿ ಹಳೆ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಸಾಧಾರಣ ಸಭೆ, ಅಭಿನಂದನಾ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿ ಪ್ರೋತ್ಸಾಹ ಧನ ವಿತರಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಬಿ.ಎಲ್.ಡಿಇ ಸಂಸ್ಥೆಯ ವಾಣಿಜ್ಯ, ಬಿ.ಎಚ್.ಎಸ್ ಕಲೆ ಮತ್ತು ಟಿ.ಜಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸನ್ ೧೯೮೪ರಲ್ಲಿ ಆರಂಭಗೊಂಡ ಹಳೆ ವಿದ್ಯಾರ್ಥಿಗಳ ಸಂಘ ೩೭ನೇ ವರ್ಷದಲ್ಲಿ ಪಾದಾರ್ಪಣೆ ಮಾಡಿದ್ದು ಎಲ್ಲ ರೀತಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ. ಕಳೆದ ೧೫ ವರ್ಷದಲ್ಲಿ ಹಳೆ ವಿದ್ಯಾರ್ಥಿಗಳ ಸಂಘದ ಮೂಲಕ ನೂರಾರು ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಆರ್ಥಿಕ ಸಹಾಯ ಮಾಡಿದೆ. ಹಳೆ ವಿದ್ಯಾರ್ಥಿಗಳ ಸಂಘದಿಂದ ಶೈಕ್ಷಣಿಕ ಚಟುವಟಿಕೆ, ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಾಗಾರ ಮತ್ತು ಸಾಂಸ್ಕೃತಿಕ ಕಾರ್ಯಗಳನ್ನು ಹಮ್ಮಿಕೊಂಡಿದೆ ಎಂದರು.
ಹಳೆ ವಿದ್ಯಾರ್ಥಿಗಳ ಸಂಘದ ೩೭ನೇ ವಾರ್ಷಿಕ ಸಭೆ ಅಭಿನಂದನಾ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹೊಸಪೇಟೆ (ವಿಜಯನಗರ) ಕರ್ನಾಟಕ ಲೋಕಾಯುಕ್ತ ಇಲಾಖೆ ಪೊಲೀಸ್ ಇನ್ಸ್ಪೆಕ್ಟರ್ ಮಹಾದೇವ ಶಿರಹಟ್ಟಿ ಮತ್ತು ಅಥಣಿಯ ಸಿ.ಪಿ.ಐ. ಸಂತೋಷ ಹಳ್ಳೂರ ಆಗಮಿಸಲಿದ್ದಾರೆ. ಅತಿಥಿಗಳಾಗಿ ಬಿ.ಎಲ್.ಡಿ.ಇ ಅಂಗ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ. ಎಸ್.ಎಚ್. ಲಗಳಿ ಆಗಮಿಸಲಿದ್ದಾರೆ. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಅರುಣಕುಮಾರ ಶಹಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಕಟ್ಟಿಮನಿ, ಸಹ ಕಾರ್ಯದರ್ಶಿ ಅರವಿಂದ ಕಡಕೋಳ, ಖಜಾಂಚಿ ಎಸ್.ಕೆ.ಬಾದರದಿನ್ನಿ, ನಿರ್ದೆಶಕರಾದ ಎಚ್.ಎಲ್.ತುಂಗಳ, ಚಂದ್ರಕಾಂತ ಜನವಾಡ, ಡಾ.ಎ.ಐ. ಮಯರ ಇದ್ದರು.

ಫೋಟೋ: ಜಮಖಂಡಿ: ನಗರದ ಬಿ.ಎಲ್.ಡಿ.ಇ ಸಂಸ್ಥೆ ವಾಣಿಜ್ಯ, ಬಿ.ಎಚ್.ಎಸ್ ಕಲೆ ಮತ್ತು ಟಿ.ಜಿ.ಪಿ ವಿಜ್ಞಾನ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಂಘದ ಕಛೇರಿ ಸಭಾಭವನದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರೊ.ಎಂ.ಸಿ.ಕಾರಭಾರಿ ಮಾತನಾಡಿದರು.

Recent Articles

spot_img

Related Stories

Share via
Copy link