ಹಾಟ್ ಫೋಟೋ ಹಂಚಿಕೊಂಡ ರಶ್ಮಿಕಾ ಕಾಲೆಳೆದ ನೆಟ್ಟಿಗರು – ಇದು ವಿಜಯ್ ದೇವರಕೊಂಡ ಶರ್ಟ್

ನಟಿ ರಶ್ಮಿಕಾ ಮಂದಣ್ಣ ಮಾಲ್ಡೀವ್ಸ್  ಪ್ರವಾಸ ಎಂಜಾಯ್ ಮಾಡುತ್ತಿದ್ದಾರೆ. ಜೊತೆಗೆ ಒಂದಿಷ್ಟು ಫೋಟೋಗಳನ್ನು ಶೇರ್ ಮಾಡುತ್ತಿದ್ದಾರೆ. ಹಿಂದಿಯಲ್ಲಿ ಗುಡ್‌ಬೈ ಸಿನಿಮಾ ರಿಲೀಸ್ ಆಗುತ್ತಿದ್ದಂತೆ ರಶ್ಮಿಕಾ ಮಾಲ್ಡೀವ್ಸ್ ಫ್ಲೈಟ್ ಹತ್ತಿದ್ದರು. ರಶ್ಮಿಕಾ ಮೊದಲ ಹಿಂದಿ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಿಸಲ್ಟ್ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದ ರಶ್ಮಿಕಾ ಸದ್ಯ ಪ್ರವಾಸವನ್ನು ವಸ್ತ್ ಮಜಾ ಮಾಡುತ್ತಿದ್ದಾರೆ.

ರಶ್ಮಿಕಾ ಸದ್ಯ ಶೇರ್ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ವಿಮ್ ಸೂಟ್ ಧರಿಸಿರುವ ರಶ್ಮಿಕಾ ಮೇಲೆ ಉದ್ದವಾದ ಶರ್ಟ್ ಹಾಕಿದ್ದಾರೆ. ಇದನ್ನು ನೋಡಿದ ಫ್ಯಾನ್ಸ್ ವಿಜಯ್ ದೇವರಕೊಂಡ ಶರ್ಟ್ ಇದು ಎಂದು ಕಾಲೆಳೆಯುತ್ತಿದ್ದಾರೆ.

ರಶ್ಮಿಕಾ ಫೋಟೋಗೆ ಸಿಕ್ಕಾಪಟ್ಟೆ ಲೈಕ್ಸ್ ಹರಿದುಬಂದಿದೆ. ಅನೇಕರು ಹಾರ್ಟ್ ಇನೋಜಿ ಇರಿಸಿ ಹಾಟ್ ಬ್ಯೂಟಿ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು ಕೆಲವರು ಈ ಫೋಟೋ ಕ್ಲಿಕ್ ಮಾಡಿದ್ದು ವಿಜಯ್ ದೇವರಕೊಂಡನಾ ಎಂದು ಕೇಳುತ್ತಿದ್ದಾರೆ

ಅಂದಹಾಗೆ ರಶ್ಮಿಕಾ ಈ ಫೋಟೋ ಶೇರ್ ಮಾಡಿ, ‘ಪೋಸ್ ನೀಡುವುದು ನನ್ನ ಜೀವನದ ಒಂದು ಭಾಗವಾಗಿದೆ. ಆದರೆ ಪರವಾಗಿಲ್ಲ. ನಾನು ನಿಮ್ಮೆಲ್ಲರಿಗೂ ಸುಂದರವಾಗಿ ಕಾಣುವಂತೆ ಪೋಸ್ ನೀಡಬೇಕಾಗಿದೆ. ನನಗೇನು ಅಭ್ಯಂತರವಿಲ್ಲ’ ಎಂದು ಬರೆದುಕೊಂಡಿದ್ದಾರೆ

ರಶ್ಮಿಕಾ ಮಂದಣ್ಣ ಮಾಲ್ಡೀವ್ಸ್‌ಗೆ ವಿಜಯ್ ದೇವರಕೊಂಡ ಹೋಗಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಆದರೆ ದೇವರಕೊಂಡ ಯಾವುದೇ ಫೋಟೋ ಶೇರ್ ಮಾಡಿಲ್ಲ. ಇತ್ತೀಚಿಗಷ್ಟೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಇಬ್ಬರೂ ಒಟ್ಟಿಗೆ ಏರ್ಪೋರ್ಟ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಮಾಲ್ಡೀವ್ಸ್ ಹೋಗಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು.

ರಶ್ಮಿಕಾ ಬಳಿ ಕೈ ತುಂಬಾ ಸಿನಿಮಾಗಳಿವೆ. ಹಿಂದಿಯಲ್ಲಿ ಮಿಷನ್ ಮಜ್ನು ಸಿನಿಮಾದ ಚಿತ್ರೀಕರಣ ಮುದಿಸಿದ್ದು ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ರಣಬೀರ್ ಕಪೂರ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ತೆಲುಗಿನಲ್ಲಿ ಪುಷ್ಪ-2 ಹಾಗೂ ತಮಿಳಿನಲ್ಲಿ ದಳಪತಿ ವಿಜಯ್ ಜೊತೆ ಸಿನಿಮಾ ಮಾಡುತ್ತಿದ್ದಾರೆ.

Recent Articles

spot_img

Related Stories

Share via
Copy link