ಬಿವೈ ರಾಘವೇಂದ್ರ – ಆಗಸ್ಟ್ 11 ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸಂಚಾರ ಆರಂಭ.

ಶಿವಮೊಗ್ಗ: ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣದಿಂದ (Shivamogga Airport) ಆ.11 ರಿಂದ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ (B.Y. Raghavendra) ತಿಳಿಸಿದ್ದಾರೆ.

 

ಶಿವಮೊಗ್ಗದಲ್ಲಿ (Shivamogga) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಹಾಗೂ ಬೆಂಗಳೂರು ಮಧ್ಯೆ ವಿಮಾನಯಾನ ಸೇವೆ ಆರಂಭವಾಗಲಿದೆ. ಈ ಸಂಬಂಧ ಇಂಡಿಗೋ ಸಂಸ್ಥೆ ಈಗಾಗಲೇ ಒಪ್ಪಂದ ಮಾಡಿಕೊಂಡಿದೆ. ಈಗಾಗಲೇ ವಿಮಾನಯಾನಕ್ಕೆ ಬೇಕಾಗಿರುವ ಎಲ್ಲಾ ತಯಾರಿ ನಡೆಸಲಾಗುತ್ತಿದೆ. ಇದರೊಂದಿಗೆ 4 ಹೊಸ ಮಾರ್ಗದಲ್ಲಿ ವಿಮಾನ ಹಾರಾಟಕ್ಕೆ ಒಪ್ಪಿಗೆ ದೊರೆತಿದೆ ಎಂದಿದ್ದಾರೆ.

ಉಡಾನ್ ಯೋಜನೆಯಡಿ ಶಿವಮೊಗ್ಗದಿಂದ 4 ಮಾರ್ಗದಲ್ಲಿ ವಿಮಾನ ಹಾರಾಟಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಹೈದರಾಬಾದ್-ಶಿವಮೊಗ್ಗ, ಗೋವಾ-ಶಿವಮೊಗ್ಗ, ತಿರುಪತಿ-ಶಿವಮೊಗ್ಗ, ದೆಹಲಿ-ಶಿವಮೊಗ್ಗ, ಚೆನ್ನೈ-ಶಿವಮೊಗ್ಗ ನಡುವೆ ವಿಮಾನ ಹಾರಾಟ ನಡೆಸಲಿವೆ ಎಂದು ಅವರು ತಿಳಿಸಿದ್ದಾರೆ.

ಫೆ. 27 ರಂದು ಶಿವಮೊಗ್ಗದ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದರು. ಉದ್ಘಾಟನೆಯ ವೇಳೆ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಮಾನ ನಿಲ್ದಾಣ ಮಲೆನಾಡಿನ ಹೆಬ್ಬಾಗಿಲಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದರು. ಇದಾದ ಬಳಿಕ ಪ್ರಾಯೋಗಿಕ ಹಾರಾಟ ನಡೆಸಿ ಪರಿಶೀಲನೆ ಕೂಡ ನಡೆದಿತ್ತು. ಈಗ ವಿಮಾನ ಹಾರಾಟಕ್ಕೆ ದಿನಾಂಕ ನಿಗದಿಯಾಗಿರುವುದು ಮಲೆನಾಡಿಗರಿಗೆ ಸಂತಸ ತಂದಿದೆ.

#AGASTYA TIMES NEWS DESK

Recent Articles

spot_img

Related Stories

Share via
Copy link